ಮಹಾರಾಜ ಶಿಕ್ಷಣ ಸಂಸ್ಥೆ (ರಿ) ಮೈಸೂರು. ಎಂಐಟಿ ಪದವಿ ಕಾಲೇಜು ಮೈಸೂರಿನಲ್ಲಿ ನವೆಂಬರ್ 08 – 2024ರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕನ್ನಡದ ಖ್ಯಾತ ಚಲನಚಿತ್ರ ನಟ – ನಿರ್ದೇಶಕ ಹಾಗೂ ಸಂಸ್ಕಾರ ಭಾರತಿ, ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷರಾದ ಶ್ರೀಯುತ ಕ. ಸುಚೇಂದ್ರ ಪ್ರಸಾದ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಪ್ರಾಚೀನತೆಯ ಮಹತ್ವ ಹಾಗೂ ಪ್ರಸಕ್ತ ಸಂದರ್ಭದಲ್ಲಿ ಹೇಗೆ ಭಾಷೆಯನ್ನು ಉಳಿಸಿ ಬೆಳೆಸಬೇಕೆಂಬುದನ್ನು ಮನವರಿಕೆ ಮಾಡಿಕೊಟ್ಟರು. ಯುವಜನಾಂಗ ನಮ್ಮ ನಾಡು, ನುಡಿ, ಭಾಷೆ, ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ಕರೆ ನೀಡಿದರು. ಕರ್ನಾಟಕ ಏಕೀಕರಣದ ಮಹತ್ವವನ್ನು ಎಳೆಎಳೆಯಾಗಿ ವಿವರಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಾರಾಜ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮುರಳಿ ಎಸ್. ಅವರು ಅಧ್ಯಕ್ಷೀಯ ಭಾಷಣದಲ್ಲಿ ದೇಶದ ಇತಿಹಾಸದ ಪುಟಗಳಲ್ಲಿ ಕರ್ನಾಟಕದ ಹಾಗೂ ಕನ್ನಡಿಗರ ಮಹತ್ವದ ಸಾಧನೆಯನ್ನು ಕುರಿತು ಮಾತನಾಡಿದರು. ಕನ್ನಡ ನಾಡನ್ನು ಆಳಿದ ಕದಂಬರು, ರಾಷ್ಟ್ರಕೂಟರು, ಗಂಗರು, ಚಾಲುಕ್ಯರು, ಹೊಯ್ಸಳರು ಹಾಗೂ ವಿಜಯನಗರ ಮತ್ತು ಮೈಸೂರು ಅರಸರ ಬಗೆಗೆ ಐತಿಹಾಸಿಕ ವಿಚಾರಗಳನ್ನು ಪ್ರಸ್ತಾಪ ಮಾಡಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿನ ಕಾರ್ಯದರ್ಶಿಗಳಾದ ಡಾ. ಟಿ. ವಾಸುದೇವ್ ಅವರು ಹಾಗೂ ಟ್ರಸ್ಟಿಗಳು, ಎಂಐಟಿಎಂ ಪ್ರಾಂಶುಪಾಲರಾದ ಡಾ. ನರೇಶ್ ಕುಮಾರ್ ಬಿ.ಜಿ. ಅವರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜು ಬಿ. ಅವರು ಎಲ್ಲರಿಗೂ ಸ್ವಾಗತ ಕೋರಿ, ದಿನದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳು ಕನ್ನಡತನವನ್ನು ಬೆಳೆಸಿಕೊಳ್ಳಲು ಉರಿದುಂಬಿಸಿದರು.

ಕಾರ್ಯಕ್ರಮ ನಿರೂಪಣೆ ಮತ್ತು ಪ್ರಾಥಮಿಕ ನುಡಿಗಳನ್ನಾಡಿದ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಶಿವರಾಜ್ ಜಿ.ಡಿ. ಭಾಷಾವಾರು ಪ್ರಾಂತ್ಯದ ವಿಂಗಡಣೆಯ ಹಿನ್ನೆಲೆಯಲ್ಲಿ ಕನ್ನಡ ಹೋರಾಟಗಾರರ ಮಹತ್ವವನ್ನು ವಿವರಿಸಿದರು. ಮತ್ತೋರ್ವ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಮಹದೇವ ಕೆ. ಎಂ. ಅವರು ಅತಿಥಿಗಳನ್ನು ವಿವರವಾಗಿ ಪರಿಚಯಿಸಿದರು. ರಾಜ್ಯೋತ್ಸವದ ಆಚರಣೆಯ ಮಹತ್ವವನ್ನು ವಿವರಿಸಿದರು.

ಕಾಲೇಜು ವಿದ್ಯಾರ್ಥಿನಿಯರ ತಂಡ ಹಾಡಿದ ‘ನಾಡಗೀತೆ’ಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ, ‘ಹಚ್ಚೇವು ಕನ್ನಡದ ದೀಪ’ ಹಾಡನ್ನೂ ಸುಶ್ರಾವ್ಯವಾಗಿ ಹಾಡಲಾಯಿತು. ಅಂತಿಮವಾಗಿ ಸಹಾಯಕ ಪ್ರಾಧ್ಯಾಪಕಿ ಕು. ತೇಜಶ್ರೀ ಕೆ. ಅವರು ವಂದನಾರ್ಪಣೆ ಮಾಡಿದರು. ಅನಂತರ ‘ರಾಷ್ಟ್ರಗೀತೆ’ಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಹಭೋಜನವನ್ನು ಏರ್ಪಡಿಸಲಾಗಿತ್ತು.

Both students and staff enjoyed the visit, finding it a valuable and memorable experience. It was a great way for students to connect their classroom learning with practical knowledge.

Overall, this visit was a successful and informative field trip for everyone involved.